ಚುನಾವಣಾ ಫಲಿತಾಂಶದ ಬಳಿಕ ದೊಡ್ಡ ಸ್ಫೋಟವಾಗಲಿದೆ : ಶ್ರೀ ರಾಮುಲು…

219
firstsuddi

ಬಳ್ಳಾರಿ : ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಪಕ್ಷಕ್ಕೆ ಸೇರುವ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಶ್ರೀ ರಾಮುಲು ಅವರು ರಾಜ್ಯದಲ್ಲಿ ರಾಜಕೀಯವಾಗಿ ಚುನಾವಣಾ ಫಲಿತಾಂಶದ ಬಳಿಕ ದೊಡ್ಡ ಸ್ಫೋಟವಾಗಲಿದೆ. ಸ್ವತಃ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ರಾಜೀನಾಮೆ ನೀಡಲಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಈಗಾಗಲೇ ಮಾನಸಿಕವಾಗಿ ಬಿಜೆಪಿ ಪಕ್ಷವನ್ನು ಗುರುತಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಪಕ್ಷದ ಪರ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ ರಮೇಶ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಬಿಜೆಪಿ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.