ಬೆಂಗಳೂರು : ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ತಮ್ಮ ಟ್ವೀಟ್ ಮೂಲಕ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಬಡಜನತೆಯ ಸಂಕಷ್ಟಗಳಿಗೆ ಎಸ್. ಬಂಗಾರಪ್ಪನವರಂತೆ ಸ್ಪಂದಿಸುವ ಗುಣವುಳ್ಳ ಮೈತ್ರಿಪಕ್ಷಗಳ ಅಭ್ಯರ್ಥಿಯಾಗಿರುವ ಮಧುಬಂಗಾರಪ್ಪನವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಬೆಂಬಲಿಸಬೇಕೆಂದು ತಮ್ಮೆಲ್ಲರಲ್ಲಿಯೂ ಮನವಿ ಮಾಡಿಕೊಳ್ಳುತ್ತಿದ್ದೇನೆ. ಸುಶಿಕ್ಷಿತ ಮಹಿಳೆಯಾಗಿರುವ ಡಾ|| ಸುನೀತಾ ದೇವಾನಂದ ಚವ್ಹಾಣ ಅವರು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅವರಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಬೆಂಬಲಿಸಬೇಕೆಂದು ವಿಜಯಪುರ ಕ್ಷೇತ್ರದ ಜನತೆಗೆ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. ಯುವ ಸಮುದಾಯದ ಆನಂದ ಅಸ್ನೋಟಿಕರ್ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಇವರ ಚಿಹ್ನೆ “ಹೊರೆ ಹೊತ್ತ ಮಹಿಳೆ” ಈ ಗುರುತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಬೇಕೆಂದು ಸಮಗ್ರ ಉತ್ತರ ಕನ್ನಡದ ಜನತೆಗೆ ಮನವಿ
ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.












