ಮನೆಯ ಸಜ್ಜೆ ಕುಸಿದು ಬಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯ…

173
firstsuddi

ತುಮಕೂರು : ಮನೆಯ ಸಜ್ಜೆ ಕುಸಿದು ಬಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಉಜ್ಜಯಿನಿಯಲ್ಲಿ ನಡೆದಿದೆ. ಭಕ್ತರು ಮನೆಯ ಸಜ್ಜೆ ಮೇಲೆ ನಿಂತುಕೊಂಡು ಚೌಡೇಶ್ವರಿ ದೇವಿ ಜಾತ್ರೆಯ ಅಗ್ನಿಕುಂಡವನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಜನರ ಭಾರ ಹೆಚ್ಚಾಗಿ ಕುಸಿದು ಬಿದ್ದಿದ್ದು, ಗಾಯಗೊಂಡವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.