ಇಂದು ನರೇಂದ್ರ ಮೋದಿಯವರಿಂದ ನಾಮಪತ್ರ ಸಲ್ಲಿಕೆ…

213
firstsuddi

ವಾರಾಣಸಿ : ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ವಾರಾಣಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದ್ಕೂ ಮೊದಲು ವಾರಾಣಸಿಯ ಕಾಲಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಹಾಗೂ ಕಾರ್ಯಕರ್ತರೊಂದಿಗೆ ಮಾತನಾಡಿ ವಾರಾಣಸಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರಪ್ರದೇಶ ಸಿಎಂ ಯೋಗಿ ಆಧಿತ್ಯನಾಥ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.