ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾಧಾತ್ಮಕ ಹೇಳಿಕೆಯನ್ನು ನೀಡುತ್ತಿದ್ದ ಜೆಡಿಎಸ್ ನಾಯಕರ ವಿರುದ್ಧ ಬಿಡಿಎ ಅಧ್ಯಕ್ಷ ಎಸ್.ಟಿ. ಸೋಮಶೇಖರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಆನೆಯಿದ್ದಂತೆ. ಆನೆ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ನಾಯಿಗಳು ಬೊಗಳುವುದು ಸರ್ವೇ ಸಾಮಾನ್ಯ ಎಂದು ಹೇಳಿದ್ದು, ಯಾರು ಈ ಕುಪೇಂದ್ರ ರೆಡ್ಡಿ ಅವರೊಬ್ಬರು ಜೆಡಿಎಸ್ ಪಕ್ಷದ ಸದಸ್ಯರಾಗಿರಬಹುದು. ಮೈತ್ರಿ ಸರ್ಕಾರದ ರಚನೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರಾದ ಕುಪೇಂದ್ರ ರೆಡ್ಡಿ ಅವರ ಪಾತ್ರ ಏನೂ ಇಲ್ಲ. ದೇವೇಗೌಡ ಹಾಗೂ ರಾಹುಲ್ ಗಾಂಧಿ ಅವರು ಸೇರಿ ಚರ್ಚಿಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ರಚಿಸಿದ್ದಾರೆ. ದೇವೇಗೌಡ ಅವರು ಮಾತನಾಡುವುದನ್ನೆಲ್ಲ ಕುಪೇಂದ್ರ ರೆಡ್ಡಿ ಅವರು ಮಾತನಾಡುತ್ತಿದ್ದಾರೆ. ಸರ್ಕಾರದ ಬಗ್ಗೆ ಮಾತನಾಡುವುದಕ್ಕೆ ದೇವೇಗೌಡ ಅವರು ಕುಪೇಂದ್ರ ರೆಡ್ಡಿ ಅವರಿಗೆ ಜಿಪಿಎ ಬರೆದುಕೊಟ್ಟಿದ್ದಾರೆಯೇ? ಎಂದು ಪ್ರಶ್ನಿಸಿದ್ದು, ರಾಜ್ಯದಲ್ಲಿ ಮೈತ್ರಿ ಸರ್ಕಾರದ ಅವಶ್ಯಕತೆ ಇಲ್ಲ ಎಂದು ಹೇಳುವ ಅಧಿಕಾರ ಕುಪೇಂದ್ರ ರೆಡ್ಡಿ ಅವರಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.










