ಡಾಟರ್ ಆಫ್ ಪಾರ್ವತಮ್ಮ ಚಿತ್ರದ ಟ್ರೈಲರ್ ಬಿಡುಗಡೆ…

501
firstsuddi

ಬೆಂಗಳೂರು : ಸ್ಯಾಂಡಲ್ ವುಡ್‍ನ ನಟಿ ಹರಿಪ್ರಿಯಾ ನಟಿಸಿರುವ ಡಾಟರ್ ಆಫ್ ಪಾರ್ವತಮ್ಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲಾತಾಣಗಳಲ್ಲಿ ಶುಭಾರಂಭವನ್ನು ಕಂಡಿದೆ. ಜೆ. ಶಂಕರ್ ಅವರು ನಿರ್ದೇಶನ ಮಾಡಿರುವ ಡಾಟರ್ ಆಫ್ ಪಾರ್ವತಮ್ಮ ಚಿತ್ರದಲ್ಲಿ ನಟಿ ಹರಿಪ್ರಿಯಾ ಅವರು ಇನ್ವೆಸ್ಟಿಗೇಟಿವ್ ಆಫಿಸರ್ ಆಗಿ ಕಾಣಿಸಿಕೊಂಡಿದ್ದು, ಒಂದು ಕ್ರೈಂ ಹಾಗೂ ಅದರ ಹಿಂದೆ ನಡೆಯುವ ಕಥೆಯನ್ನು ಈ ಚಿತ್ರದಲ್ಲಿ ಬಿಂಬಿಸಲಾಗಿದೆ. ಸುಮಲತಾ ಅಂಬರೀಶ್ ಅವರು ನಟಿ ಹರಿಪ್ರಿಯಾ ಅವರ ತಾಯಿಯಾಗಿ ನಟಿಸಿದ್ದು, ಅಮ್ಮ ಮಗಳ ಭಾವನಾತ್ಮಕ ಕಥೆಯನ್ನು ಒಳಗೊಂಡಿದೆ. ಡಾಟರ್ ಆಫ್ ಪಾರ್ವತಮ್ಮ ಚಿತ್ರವನ್ನು ಕೆ.ಎಂ ಶಶಿಧರ್ ಅವರು ನಿರ್ಮಾಣ ಮಾಡಿದ್ದಾರೆ.