ನಟ ಪಿ. ಪ್ರಮೋದ್ ಕುಮಾರ್ ಅವರಿಂದ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ…

317
firstsuddi

ಬೆಂಗಳೂರು : ನಟ ಹಾಗೂ ಕಿರುಚಿತ್ರ ನಿರ್ದೇಶಕರಾದ ಪಿ ಪ್ರಮೋದ್ ಕುಮಾರ್ ಎಂಬುವವರು 21ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತನ್ನ ತಾಯಿಯ ಎದುರೇ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಹಾಗೂ ಪ್ರಮೋದ್ ಅವರು ಅಕ್ಕಪಕ್ಕದ ಮನೆಯವರಾಗಿದ್ದು, ಕಳೆದ 2 ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಪ್ರಮೋದ್ ಅವರು ನನ್ನ ಹುಟ್ಟುಹಬ್ಬದ ಪಾರ್ಟಿ ಇದೆ ಎಂದು ಮನೆಗೆ ಕರೆದುಕೊಂಡು ಹೋಗಿ ಈ ಕೃತ್ಯವನ್ನು ಎಸಗಿದ್ದಾರೆ. ಸದ್ಯ ಆರೋಪಿಯನ್ನು ವಿವೇಕನಗರ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.