ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮೂವರು ಉಗ್ರರನ್ನು ಭದ್ರತಾ ಸಿಬ್ಬಂಧಿ ಹೊಡೆದುರುಳಿಸಿದ್ದಾರೆ. ಗುಪ್ತಚರ ಇಲಾಖೆಯವರಿಂದ ಪುಲ್ವಾಮದ ದಿಲಿಪೊರ ಎಂಬ ಗ್ರಾಮದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಯೋಧರ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದು, ತಕ್ಷಣ ಸ್ಥಳವನ್ನು ಸುತ್ತುವರಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎನ್ನಲಾಗಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರು ಹಾಗೂ ಇಬ್ಬರು ನಾಗರೀಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.










