ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ, 11 ಜನರ ಬಂಧನ…

181
firstsuddi

ಚೆನ್ನೈ : ಮಕ್ಕಳ್ ನಿಧಿ ಮೈಯಂ ಎಂಬ ರಾಜಾಕೀಯ ಪಕ್ಷವನ್ನು ಸ್ಥಾಪಿಸಿದ ನಟ ಕಮಲ್ ಹಾಸನ್ ಅವರು ಕೆಲ ದಿನಗಳ ಹಿಂದೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೂಡ್ಸೆ ದೇಶದ ಮೊದಲ ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದು, ನಿನ್ನೆ ತಿರುಪ್ಪರಂಕುಂದರಂ ವಿಧಾನಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಕಮಲ್ ಹಾಸನ್ ಅವರ ಮೇಲೆ ಚಪ್ಪಲಿಯನ್ನು ಎಸೆದಿದ್ದಾರೆ. ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಕೆಲ ಹಿಂದು ಪರ ಸಂಘಟನೆಗಳು ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಚಪ್ಪಲಿಯನ್ನು ಎಸೆದಿದ್ದಾರೆ ಎಂದು ಕಮಲ್ ಹಾಸನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಹಿಂದು ಪರ ಸಂಘಟನೆಯ 11 ಜನರನ್ನು ಬಂಧಿಸಿದ್ದಾರೆ.