ಮೋದಿ ಪ್ರಮಾಣವಚನ ಸ್ವೀಕಾರ, ಚಪ್ಪಾಳೆ ತಟ್ಟಿ ಸಂಭ್ರಮಿಸಿದ ತಾಯಿ ಹೀರಾಬೆನ್…

224
firstsuddi

ಅಹಮದಾಬಾದ್ : ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ 2ನೇ ಬಾರಿ ಪ್ರದಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ನಿನ್ನೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೋದಿ ಅವರ ಪ್ರಮಾಣವಚನ ಸಮಾರಂಭವನ್ನು ಟಿ.ವಿಯಲ್ಲಿ ವೀಕ್ಷಿಸಿದ ಮೋದಿಯವರ ತಾಯಿ ಹೀರಾಬೆನ್ ಅವರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದು, ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ಸಂಜೆ ನಡೆದ ಪ್ರಮಾಣವಚನ ಸಮಾರಂಭದಲ್ಲಿ ನರೇಂದ್ರ ಮೋದಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದ್ದು, ಕರ್ನಾಟಕದ ಮೂವರು ಸಂಸದರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ವಿದೇಶಿ ಗಣ್ಯರು, ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಮಾಜಿ ಪ್ರಧಾನಿಗಳು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.