ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್.ವಿಶ್ವನಾಥ್…

443
firstsuddi

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೀನಾಯ ಸೋಲು ಕಂಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೆಡಿಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರಿಗೆ ಪತ್ರವನ್ನು ಬರೆದಿದ್ದಾರೆ. ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹೀನಾಯ ಸೋಲಿಗೆ ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮರು ದಿನವೇ ರಾಜೀನಾಮೆ ನೀಡಬೇಕು ಎಂದು ಹೆಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿದ್ದೆ. ಆದರೆ ಅವರು ಸ್ವಲ್ಪದಿನ ಕಾಯುವಂತೆ ಸಲಹೆ ನೀಡಿದ್ದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಹೆಚ್. ವಿಶ್ವನಾಥ್ ಅವರು ಬರೆದ ಪತ್ರದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದು ನನ್ನ ರಾಜಾಕೀಯ ಜೀವನದ ಬಹುಮುಖ್ಯ ಘಟ್ಟ ಎಂದು ಭಾವಿಸಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಹೊರಬಂದ ನನಗೆ ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಜೀವನದ ಪುನರ್‍ಜನ್ಮಕ್ಕೆ ಆಶೀರ್ವದಿಸಿದ್ದೀರ ಎಂದು ಹೆಚ್.ಡಿ ದೇವೇಗೌಡ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಸಮನ್ವಯ ಸಮಿತಿಯ ರಚನೆ ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿದ್ದು, ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿದೆ. ಸಮನ್ವಯ ಸಮಿತಿಯಿಂದ ಸಮನ್ವಯ ಸಾಧಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ.