ಪ್ರಯಾಣಿಕರ ಸಮಸ್ಯೆಯನ್ನು ಆಲಿಸಿದ ರೈಲ್ವೇ ಸಚಿವ ಸುರೇಶ್ ಅಂಗಡಿ.

325

ಬೆಂಗಳೂರು : ರೈಲ್ವೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸುರೇಶ್ ಅಂಗಡಿ ಅವರು ಸಚಿವರಾದ ಬಳಿಕ ಮೊದಲ ಕೆಲಸವನ್ನು ಕೈಗೊಂಡಿದ್ದು, ಸೋಮವಾರ ರಾತ್ರಿ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ನೀಲ್ದಾಣದ ಆಡಳಿತ ವ್ಯವಸ್ಥೆ, ಕುಂದು ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟ ರಾಣಿ ಚೆನ್ನಮ್ಮ ಎಕ್ಸ್‍ಪ್ರೆಸ್ ರೈಲ್‍ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರ ಸಮಸ್ಯೆಗಳನ್ನು ತಿಳಿದುಕೊಂಡಿದ್ದು, ಆದಷ್ಟು ಬೇಗ ಪ್ರಯಾಣಿಕರ ಸಮಸ್ಯೆಗಳಿಗೆ ಪರಿಹಾರ ನೀಡಿ ಉತ್ತಮ ಸೌಲಭ್ಯವನ್ನು ಒದಗಿಸುವುದಾಗಿ ಭರವಸೆಯನ್ನು ನೀಡಿದ್ದಾರೆ.