ಚಿಕ್ಕಮಗಳೂರು – ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತ ಸೇವಾದಳದ ಜ್ಞಾನಜ್ಯೋತಿ ಘಟಕ ನಗರದ ಆಜಾದ್ ಪಾರ್ಕ್ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಜೂ.15 ರಿಂದ 21 ರ ವರೆಗೆ ಯೋಗ ಸಪ್ತಾಹ-ಯೋಗ ಕಲಿಕಾ ಶಿಬಿರವನ್ನು ಆಯೋಜಿಸಿದೆ.
ಸಪ್ತಾಹದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಸೂರ್ಯ ನಮಸ್ಕಾರ, ಪ್ರಾರ್ಥನೆ, ಪ್ರಾಣಾಯಾಮ, ಧ್ಯಾನ ಹಾಗೂ ಯೋಗಾಸನವನ್ನು ಉಚಿತವಾಗಿ ಕಲಿಸಲಾಗುವುದು ಎಂದು ಸೇವಾದಳದ ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಹೆಸರು ನೋಂದಣಿ ಮತ್ತು ಹೆಚ್ಚಿನ ಮಾಹಿತಿಗೆ 9448997563 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.










