ಸಿಇಟಿ ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು…

168
firstsuddi

ಚೆನ್ನೈ : ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ವಿಲ್ಲುಪುರಂ ನಿವಾಸಿ ಎಂ. ಮೋನಿಷಾ(18) ಕಳೆದ ಬಾರಿ ಬರೆದ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದು, ಈ ಬಾರಿಯೂ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದ್ದೇನೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗೂ ತಿರ್‍ಪುರ್‍ನ ರಿತುಶ್ರೀ, ಪುದುಕೋಟೈನ ವೈಷಿಯಾ ಕೂಡಾ ತಾವು ನಿರೀಕ್ಷೆ ಮಾಡಿದ ಅಂಕ ಗಳಿಸಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.