ಸಕಲೇಶಪುರ : ಮಲೆನಾಡು ಭಾಗದಲ್ಲಿ ತಪ್ಪದ ಕಾಡಾನೆಗಳ ಹಾವಳಿ…

414

ಹಾಸನ : ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಹಳಕೆರೆ, ಕುಂಬ್ರಹಳ್ಳಿ, ಹೊಸಗದ್ದೆ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡಾನೆಗಳು ಹಿಂಡು ಕಟ್ಟಿಕೊಂಡು ಓಡಾಡುತ್ತಿದ್ದು, ಕಾಫಿ ಹಾಗೂ ಶುಂಠಿ ಬೆಳೆಗಳನ್ನು ನಾಶ ಮಾಡುತ್ತಿದ್ದು, ಆನೆಗಳ ಓಡಾಟದಿಂದ ಕಾರ್ಮಿಕರು ಕೆಲಸಕ್ಕೆ ಬಾರದೆ ಪ್ರತಿನಿತ್ಯ ಗ್ರಾಮಸ್ಥರು ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತೋಟದ ನೀರುಗುಂಡಿಗಳಲ್ಲಿ ಈಜುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಇದಕ್ಕೆ ಶಾಶ್ವತ ಪರಿಹಾರ ದೊರಕಿಸಬೇಕು ಎಂದು ಮಲೆನಾಡು ಜನರು ಆಗ್ರಹಿಸಿದ್ದಾರೆ.