ಶಿಕ್ಷಕಿ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ದುಷ್ಕರ್ಮಿ…

740
firstsuddi

ಕೊಡಗು : ಅಪರಿಚಿತ ವ್ಯಕ್ತಿಯೊಬ್ಬ ಹೈಸ್ಕೂಲ್ ಶಿಕ್ಷಕಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಬಾಳೆಲೆಯ ಲಯನ್ಸ್ ಶಾಲೆ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ(50) ಗುಂಡೇಟಿಗೆ ತುತ್ತಾಗಿರುವ ಶಿಕ್ಷಕಿಯಾಗಿದ್ದಾರೆ. ಆಶಾ ಕಾವೇರಮ್ಮ ಅವರು ಬೆಳಿಗ್ಗೆ 8.15 ರ ಸುಮಾರಿಗೆ ಕರ್ತವ್ಯಕ್ಕೆ ತೆರಳಲೆಂದು ಶಾಲಾ ವಾಹನಕ್ಕಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ದುಷ್ಕರ್ಮಿ ಐದು ಬಾರಿ ಗುಂಡು ಹಾರಿಸಿದ್ದು, ಬಳಿಕ ಆರೋಪಿ ಮಾಚಿಮಡ ಜಗದೀಶ್(60) ಕೂಡಾ ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ದಾಳಿ ವೇಳೆ ಓರ್ವ ವಿದ್ಯಾರ್ಥಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.