ಸೀಮೆಎಣ್ಣೆ ಸುರಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ…

194
firstsuddi

ಬೆಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳು ಯುವಕರ ಕಿರುಕುಳ ತಾಳಲಾರದೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲ್ಲೂಕಿನ ಎಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಧನಲಕ್ಷ್ಮಿ(14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಆರೋಪಿ ಜಗದೀಶ್ ಹಾಗೂ ರವಿಕುಮಾರ್ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದು, ಪ್ರೀತಿಸದಿದ್ದರೆ ಮನೆಯವರೆಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಬಾಲಕಿ ಬೆದರಿಕೆಗೆ ಹೆದರಿ ಮನೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಬಾಲಕಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದು, ಆರೋಪಿಗಳಾದ ಜಗದೀಶ್ ಹಾಗೂ ರವಿಕುಮಾರ್ ಅವರನ್ನು ಡಾಬಸ್ಪೇಟೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.