ಆಟೋ ಹಾಗೂ ಬಸ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು…

163
firstsuddi

ಬೆಂಗಳೂರು : ಆಟೋ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ. ಹಸೀನಾ(30), ಸಾನಿಯಾ(17), ಸಾಜಿಯಾ(8), ಜೊಯಾ(05) ಮೃತ ದುರ್ಧೈವಿಗಳು. ಮೃತರು ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾಮದವರು ಎನ್ನಲಾಗಿದ್ದು, ಆಧಾರ್ ಕಾರ್ಡ್ ಮಾಡಿಸಲು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ 7 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.