ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ, ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ…

165
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಇಂದು ಬೆಳಿಗ್ಗೆ ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅನಂತ್‍ನಾಗ್ ಜಿಲ್ಲೆಯ ಬಿಚ್ಚಿಹಾರ ಸಮೀಪದ ಮರ್ಹಮಾ ಸಂಗಮ್ ಎಂಬ ಗ್ರಾಮದಲ್ಲಿರುವ ಒಂದು ಮನೆಯಲ್ಲಿ 2-3 ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಮನೆಯನ್ನು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಯೋಧರೊಬ್ಬರು ಹುತಾತ್ಮರಾಗಿದ್ದು, ಈ ವೇಳೆ ಭದ್ರತಾಪಡೆಗಳು ಪ್ರತಿ ದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.