ಜಮ್ಮು ಕಾಶ್ಮೀರದ ಬೋನಿಯರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ…

228
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾದ ಬೋನಿಯರ್ ನಲ್ಲಿ ಇಂದು ಬೆಳಿಗ್ಗೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಇನ್ನೂ ಕೆಲ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿದೆ.