ಚಿಕ್ಕಮಗಳೂರು : ಬಿಜೆಪಿ ಮುಖಂಡ ಮಹಮದ್ ಅನ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದು ಒಂದು ವರ್ಷ ಕಳೆದರು ಆರೋಪಿಗಳು ಪತ್ತೆಯಾಗದ ಹಿನ್ನೆಲೆ, ಬಿಜೆಪಿ ಮುಖಂಡರು ಹಾಗೂ ಅನ್ವರ್ ಅವರ ಕುಟುಂಬಸ್ಥರು ಚಿಕ್ಕಮಗಳೂರಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ವರ್ ಅವರ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದ್ದು, ಕಳೆದ ವರ್ಷ ನಗರದ ಗೌರಿ ಕಾಲುವೆಯಲ್ಲಿ ಅನ್ವರ್ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಎಸ್ಪಿ ಅಣ್ಣಾಮಲೈ ನೇತೃತ್ವದಲ್ಲಿ ಆರೋಪಿಗಳ ಸೆರೆಗೆ 3ತಂಡಗಳನ್ನು ರಚನೆ ಮಾಡಲಾಗಿತ್ತು. ಆದರೆ ಎಲ್ಲಾ ಹಂತಗಳನ್ನು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಉಪವಾಸ ಸತ್ಯಾಗ್ರವನ್ನು ಆರಂಭಿಸಲಾಗಿದೆ.










