ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರೈತರ ಆಕ್ರೋಶ…

220
firstsuddi

ಮಂಡ್ಯ : ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಅವರ ಕಾರನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಆರ್‍ಎಸ್ ಅಣೆಕಟ್ಟಿನಿಂದ ನೀರು ಬಿಡುವಂತೆ ಆಗ್ರಹಿಸಿ ಕಳೆದ 3ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಸಚಿವ ಡಿ.ಕೆ. ಶಿವಕುಮಾರ್ ಅವರು ಆಗಮಿಸುತ್ತಿರುವುದನ್ನು ತಿಳಿದ ರೈತರು ಹೆದ್ದಾರಿಯಲ್ಲಿ ಕಾರನ್ನು ತಡೆದು ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಆರ್‍ಎಸ್ ಅಣೆಕಟ್ಟಿನಿಂದ ನೀರು ಬಿಡಲು ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದ್ದು, ನೀರು ಬಿಡಲು ಹೇಳಿದರೆ ಕೇಂದ್ರ ನಿರ್ವಹಣಾ ಪ್ರಾಧಿಕಾರ ಒಪ್ಪುತ್ತಿಲ್ಲ ಎಂದು ಹೇಳುತ್ತೀರ. ಆದರೆ ಚುನಾವಣೆಯ ಸಂದರ್ಭದಲ್ಲಿ ಯಾವಾ ಪ್ರಾಧಿಕಾರದ ಅಪ್ಪಣೆಯನ್ನು ಪಡೆಯದೆ ನೀರನ್ನು ಬಿಡುತ್ತೀರ. ಈಗ ನೀರು ಕೇಳಿದರೆ ಪ್ರಾಧಿಕಾರ ಒಪ್ಪುತ್ತಿಲ್ಲ ಎಂದು ಹೇಳುತ್ತೀರ ಎಂದು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.