ಬೆಂಗಳೂರು : ಸ್ಯಾಂಡಲ್‍ವುಡ್ ನಟ ಪ್ರಜ್ವಲ್ ದೇವರಾಜ್ ಅವರು ಇಂದು ತಮ್ಮ 32ನೇ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಶಾಲೆಯನ್ನು ದತ್ತು ಪಡೆಯುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಪ್ರಜ್ವಲ್ ದೇವರಾಜ್ ಅವರ ಈ ಕಾರ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಟ್ವಿಟರ್‍ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ನಮ್ಮ ಹುಡ್ಗ ಪ್ರಜ್ಜು ಒಂದು ಕನ್ನಡ ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಸುದ್ದಿ ಕೇಳಿ ತುಂಬಾನೇ ಖುಷಿಯಾಯ್ತು. ಇಂಥ ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿ ಹೀಗೆ ಸದಾ ಮುಂಚೂಣಿಯಲ್ಲಿರಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದು, ಪ್ರಜ್ವಲ್ ಅವರ ಹುಟ್ಟು ಹಬ್ಬಕ್ಕೆ ಕುಟುಂಬಸ್ಥರು ಸುಮಾರು 90ಲಕ್ಷ ರೂ ಬೆಲೆ ಬಾಳುವ ವೋಲ್ವೋ ಎಕ್ಸ್ ಸಿ-90 ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.











