ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ತಿಳಿಸಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ…

282
firstsuddi

ಬೆಂಗಳೂರು : ಮುಖ್ಯಮಮತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಇಂದು ಲೋಕಸಭಾ ಅಧಿವೇಶನದಲ್ಲಿ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯುವಂತೆ ಪ್ರಕಟಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಧನ್ಯವಾದವನ್ನು ತಿಳಿಸಿದ್ದು, ನಮ್ಮ ಮನವಿಯಂತೆ ಬ್ಯಾಂಕ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ವಂದನೆಗಳು. ಇದರಿಂದ ನಮ್ಮ ಗ್ರಾಮೀಣ ಪ್ರದೇಶದ ಯುವ ಸಮುದಾಯಕ್ಕೆ ಅತ್ಯಂತ ಅನುಕೂಲವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.