ಮೈತ್ರಿ ಸರ್ಕಾರಕ್ಕೆ ಶಾಕ್, 13 ಶಾಸಕರ ರಾಜೀನಾಮೆ?

840
firstsuddi

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬದಲಾವಣೆ ಕಾಣುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ 13 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಬಂಡಾಯಗಾರರಾದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದ್ದು, ಬೆಂಗಳೂರಿನ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ.ಆರ್ ಪೇಟೆ ಶಾಸಕ. ನಾರಾಯಣ ಗೌಡ ಇವರೆಲ್ಲರ ಹೆಸರು ರಾಜೀನಾಮೆ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದ್ದು, ವಿಧಾನಸೌಧದ ಸ್ಪೀಕರ್ ಕಚೇರಿಗೆ 12 ಶಾಸಕರು ರಾಜೀನಾಮೆಯನ್ನು ಸಲ್ಲಿಸಲು ಆಗಮಿಸಿದ್ದಾರೆ ಎನ್ನಲಾಗಿದೆ.