ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನ…

183
firstsuddi

ಬೆಂಗಳೂರು : ರಾಜ್ಯ ರಾಜಾಕಾರಣದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು, ನಾಗೇಶ್ ಅವರು ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಮುಳುಬಾಗಿಲು ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾದ ನಾಗೇಶ್ ಅವರಿಗೆ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಕಳೆದ ಜೂನ್ 14 ರಂದು ಜೆಡಿಎಸ್ ಕೋಟಾದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅತೃಪ್ತ ಶಾಸಕರೊಂದಿಗೆ ಸೇರಿಕೊಂಡಿದ್ದಾರೆ.