ಬಾಗಲಕೋಟೆ : ವಸತಿ ನಿಲಯದ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಪ್ರಿಯಾಂಕ ಮೇತ್ರಿ(17) ಮೃತ ವಿದ್ಯಾರ್ಥಿನಿ ಎನ್ನಲಾಗಿದ್ದು, ಪ್ರಿಯಾಂಕ ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ನಿವಾಸಿಯಾಗಿದ್ದು, ಜಮಖಂಡಿಯ ರಾಯಲ್ ಪ್ಯಾಲೆಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ರಾತ್ರಿ ಕಾಲೇಜಿನ ವಸತಿ ನಿಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಜಮಖಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










