ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ ಸ್ಪೀಕರ್ ರಮೇಶ್ ಕುಮಾರ್…

255
firstsuddi

ಬೆಂಗಳೂರು : ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿರುವ ವಿಷಯವಾಗಿ ಇಂದು ಸಂಜೆ 6ಗಂಟೆಯೊಳಗೆ ಶಾಸಕರ ರಾಜೀನಾಮೆ ಅಂಗೀಕಾರದ ಬಗ್ಗೆ ನಿರ್ಧಾರ ತೆಗೆದುಕೊಂಡು ನಾಳೆ ತಿಳಿಸುವಂತೆ ಆದೇಶ ಹೊರಡಿಸಿತ್ತು. ಆದರೆ ಸ್ಪೀಕರ್ ರಮೇಶ್ ಕುಮಾರ್ ಅವರು ಸಂಜೆ 6ಗಂಟೆಯೊಳಗೆ ರಾಜೀನಾಮೆ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಪ್ರತ್ಯುತ್ತರ ನೀಡಿದ ಸುಪ್ರೀಂ ಕೋರ್ಟ್ ಇಂದು ಸ್ಪೀಕರ್ ಅವರು ನೀಡಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ. ಈ ಅರ್ಜಿ ವಿಚಾರಣೆಯನ್ನು ನಾಳೆ ನಡೆಸುವಂತೆ ತಿಳಿಸಿದೆ.