ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು…

272
firstsuddi

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಉದ್ದೇಬೋರನಹಳ್ಳಿ ಬಳಿ ನಡೆದಿದೆ. ನಾಗರಾಜ್, ಮಹೇಶ್ ಹಾಗೂ ಸುರೇಶ್ ಮೃತ ದುರ್ದೆವಿಗಳು ಎನ್ನಲಾಗಿದ್ದು, ನಿನ್ನೆ ರಾತ್ರಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನ ಪಡೆದು ಬಳ್ಳಾರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟು ಕಾರಿನಲ್ಲಿದ್ದ ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.