ರಕ್ಷಣೆ ಕೋರಿ ಮುಂಬೈ ಪೊಲೀಸರಿಗೆ ಪತ್ರ ಬರೆದ ಅತೃಪ್ತ ಶಾಸಕರು…

330
firstsuddi

ಮುಂಬೈ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ರಿನೈಸೆನ್ಸ್ ಹೋಟೆಲ್‍ನಲ್ಲಿರುವ 14 ಅತೃಪ್ತ ಶಾಸಕರು ತಮಗೆ ರಕ್ಷಣೆ ಕೋರಿ ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕರು ನಮಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಮ್ ನಬಿ ಸೇರಿದಂತೆ ಇತರೆ ಯಾವುದೇ ಕಾಂಗ್ರೆಸ್ ನಾಯಕರನ್ನು ನಾವು ಭೇಟಿಯಾಗುವ ಉದ್ದೇಶವಿಲ್ಲ. ಯಾವುದೇ ನಾಯಕರು ನಮ್ಮನ್ನು ಭೇಟಿಯಾಗದಂತೆ ತಡೆಯಿರಿ ಎಂದು ಅತೃಪ್ತ ಶಾಸಕರು ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದಾರೆ.