ಬೆಂಗಳೂರು : ಜಿ.ಟಿ. ದೇವೇಗೌಡ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಅಭಿಮಾನಿಗಳು ಬಿಜೆಪಿಗೆ ಸೇರುತ್ತಿರುವ ಜಿ.ಟಿ. ದೇವೇಗೌಡ ಅವರಿಗೆ ಸ್ವಾಗತ ಎಂದು ಬರೆದು ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಆ ಪೋಸ್ಟ್ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಅಪ್ಪ-ಮಕ್ಕಳ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿ ಬರುತ್ತಿರುವ ಜಿ.ಟಿ. ದೇವೇಗೌಡ ಅವರಿಗೆ ಸ್ವಾಗತ. ನಮ್ಮ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜೀ ಅವರು ದೇಶಕ್ಕೆ ನೀಡುತ್ತಿರುವ ಅಪಾರ ಗೌರವ ಯೋಜನೆಗಳನ್ನು ಇಷ್ಟಪಟ್ಟು ಬಿಜೆಪಿಗೆ ಸೇರುತ್ತಿರುವ ಜಿಟಿಡಿ ಅವರಿಗೆ ಸುಸ್ವಾಗತ. ನಿಮ್ಮ ಮಗ ಹರೀಶ್ಗೌಡ ಅವರಿಗೆ ಚುನಾವಣೆ ಟಿಕೆಟ್ ನೀಡದ ಜೆಡಿಎಸ್ ಇದ್ದು ಸತ್ತಂತೆ. ಬಿಜೆಪಿಗೆ ಬಂದು ತಮ್ಮ ಚಾಮುಂಡೇಶ್ವರಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಬರೆದು ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮೇಲೆ ಪೋಸ್ಟ್ ಹಾಕಿದ್ದಾರೆ.










