ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಎಸ್‍ಐಟಿ ಅಧಿಕಾರಿಗಳು…

215
firstsuddi

ಬೆಂಗಳೂರು : ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರೋಷನ್ ಬೇಗ್ ಅವರಿಗೆ 2ಬಾರಿ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿತ್ತು. ಆದರೆ 2ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ರೋಷನ್ ಬೇಗ್ ಅವರು ಮುಂಬೈಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ ಎಂಬ ಮಾಹಿತಿಯನ್ನು ತಿಳಿದ ಎಸ್‍ಐಟಿ ಅಧಿಕಾರಿಗಳು ನಿನ್ನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.