ನವದೆಹಲಿ : ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನಿನ್ನೆ ನಡೆದ ವಾದ-ಪ್ರತಿವಾದವನ್ನು ಪರಿಗಣಿಸಿ ಇಂದು ಸುಪ್ರೀಂ ಕೋರ್ಟ್ 10:30ಕ್ಕೆ ತೀರ್ಪನ್ನು ನೀಡುವುದಾಗಿ ತಿಳಿಸಿತ್ತು. ತೀರ್ಪನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರ ರಾಜೀನಾಮೆ ಕುರಿತು ಸ್ಪೀಕರ್ ಅವರೇ ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ನಾವು ಮಧ್ಯಸ್ಥಿಕೆ ವಹಿಸುವುದಿಲ್ಲ. ಈ ವಿಚಾರವಾಗಿ ಸ್ಪೀಕರ್ ಅವರೇ ನಿರ್ಧಾರ ಕೈಗೊಳ್ಳಲಿ. ನಾಳೆ ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸ ಮತಯಾಚನೆ ಮಾಡುತ್ತಿರುವ ಹಿನ್ನೆಲೆ, ರಾಜೀನಾಮೆ ನೀಡಿರುವ 15 ಅತೃಪ್ತ ಶಾಸಕರನ್ನು ವಿಧಾನಸಭೆಗೆ ಹಾಜರಾಗಬೇಕೆಂದು ಒತ್ತಾಯ ಮಾಡುವಂತಿಲ್ಲ. ಸದನಕ್ಕೆ ಹಾಜರಾಗುವುದು ಶಾಸಕರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿದೆ.










