ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್‍ನನ್ನು ವಶಕ್ಕೆ ಪಡೆದ ಎಸ್‍ಐಟಿ ಅಧಿಕಾರಿಗಳು…

237
firstsuddi

ನವದೆಹಲಿ : ಐಎಂಎ ಕಂಪನಿ ಬಹುಕೋಟಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್‍ನನ್ನು ಎಸ್‍ಐಟಿ ಅಧಿಕಾರಿಗಳು ದೆಹಲಿಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಸಾವಿರಾರು ಹಣ ಹೂಡಿಕೆದಾರರಿಗೆ ವಂಚಿಸಿ ದುಬೈನಲ್ಲಿ ತಲೆಮರಿಸಿಕೊಂಡಿದ್ದ ಮನ್ಸೂರ್ ಖಾನ್ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿಯನ್ನು ತಿಳಿದು ಎಸ್‍ಐಟಿ ಅಧಿಕಾರಿಗಳು ನಿನ್ನೆ ಮಧ್ಯರಾತ್ರಿ 1.45ರ ಸುಮಾರಿಗೆ ಮನ್ಸೂರ್ನನ್ನು ವಶಕ್ಕೆ ಪಡೆದಿದ್ದಾರೆ.