ಬೆಂಗಳೂರು : ಐಎಂಎ ಬಹುಕೋಟಿ ರೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಅವರನ್ನು ಇಡಿ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದು, ಬೆಂಗಳೂರಿನ ಇಡಿ ಅಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮನ್ಸೂರ್ ಖಾನ್ ಅವರು ಭಾರತಕ್ಕೆ ಬರುವ ಖಚಿತ ಮಾಹಿತಿಯನ್ನು ತಿಳಿದ ಎಸ್‍ಐಟಿ ಅಧಿಕಾರಿಗಳು ದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ವಿಚಾರಣೆ ನಡೆಸಿದರು. ಬಳಿಕ ಇಡಿ ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆ ವೇಳೆ ಮನ್ಸೂರ್ ಖಾನ್ 200ಕೋಟಿಗೂ ಅಧಿಕ ಅಕ್ರಮ ಆಸ್ತಿ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದ್ದು, ವಿಚಾರಣೆ ಮುಂದುವರೆಸಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆ ಮುಗಿದ ಬಳಿಕ ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಮುಂದುವರೆಸಲಿದ್ದಾರೆ ಎಂದು ತಿಳಿದು ಬಂದಿದೆ.










