ಕೆಲವೊಂದು ಒತ್ತಡದಿಂದ ರಾಜೀನಾಮೆಯನ್ನು ವಾಪಸ್ ಪಡೆಯುವುದು ಅನಿವಾರ್ಯವಾಯಿತು : ರಾಮಲಿಂಗಾ ರೆಡ್ಡಿ…

274
firstsuddi

ಬೆಂಗಳೂರು : ನಾನು ಹೆಚ್.ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಅತೃಪ್ತಿ ವ್ಯಕ್ತಪಡಿಸಿ ರಾಜೀನಾಮೆ ನೀಡಲು ಮುಂದಾಗಿದ್ದು ನಿಜ ಎಂದು ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದು, ಹೆಚ್.ಡಿ. ದೇವೇಗೌಡರನ್ನು ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೆಂಗಳೂರಿನ ಇಬ್ಬರು ಶಾಸಕರೊಂದಿಗೆ ಸೇರಿ ರಾಜೀನಾಮೆ ನೀಡಲು ನಿರ್ಧರಿಸಿದ್ದು ನಿಜ. ಆದರೆ ಕೆಲವೊಂದು ಒತ್ತಡದಿಂದ ನನ್ನ ರಾಜೀನಾಮೆಯನ್ನು ವಾಪಸ್ ಪಡೆಯುವುದು ಅನಿವಾರ್ಯವಾಯಿತು. ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಡಿಸಿಎಂ ಡಾ.ಜಿ. ಪರಮೇಶ್ವರ್ ಅವರು ಸೇರಿದಂತೆ ಕಾಂಗ್ರೆಸ್‍ನ ಹಲವು ಮುಖಂಡರು ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಿದರು. ಹೀಗಾಗಿ ನಾನು ನನ್ನ ರಾಜೀನಾಮೆಯನ್ನು ಹಿಂಪಡೆದಿದ್ದೇನೆ ಎಂದು ಹೇಳಿದರು.