ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬಿ.ಎಸ್. ಯಡಿಯೂರಪ್ಪ…

298
firstsuddi

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಅವರು ಇಂದು 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ಕುರಿತು ರಾಜ್ಯಪಾಲರಾದ ವಜೂಬಾಯ್ ವಾಲಾ ಅವರನ್ನು ಭೇಟಿಯಾಗಿ ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಆದರೆ ರಾಜ್ಯಪಾಲರು ಇಂದು ಸಂಜೆ 6ಗಂಟೆಗೆ ಪ್ರಮಾಣವಚನ ಸ್ವೀಕರಿಸಲು ಸಮಯ ನಿಗಧಿಪಡಿಸಿದ್ದಾರೆ ಎನ್ನಲಾಗಿದ್ದು, ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು ನಾನು ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಮಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಇದಕ್ಕೆ ರಾಜ್ಯಪಾಲರು ಸಹಮತವನ್ನು ವ್ಯಕ್ತಪಡಿಸಿ ಪತ್ರವನ್ನು ನೀಡಿದ್ದಾರೆ. ಇಂದು ಸಂಜೆ 6ರಿಂದ 6:15ರವೊಳಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದೇನೆ. ನಮ್ಮೆಲ್ಲಾ ಶಾಸಕರು ಹಾಗೂ ಎಂಎಲ್‍ಸಿಗಳು ಹಾಗೂ ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿಎಲ್‍ಪಿ ನಾಯಕರಾದ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.