ರಾಜ್ಯಪಾಲರು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ : ಹೆಚ್.ಕೆ ಪಾಟೀಲ್…

249
firstsuddi

ವಿಜಯಪುರ : ರಾಜ್ಯಪಾಲರು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಹೆಚ್.ಕೆ ಪಾಟೀಲ್ ಅವರು ರಾಜ್ಯಪಾಲರಾದ ವಜೂಭಾಯ್ ವಾಲಾ ಅವರ ವಿರುದ್ಧ ಅಸಾಮಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವುದರ ಬಗ್ಗೆ ರಾಜ್ಯದ ಜನತೆಗೆ ವಿವರಣೆ ನೀಡಬೇಕು. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವುದರ ಬಗ್ಗೆ ಆತುರ ಯಾಕೆ ಮಾಡಬೇಕಿತ್ತು? ಎಂದು ಪ್ರಶ್ನಿಸಿದ್ದು, ಈ ವೇಳೆ ಅತೃಪ್ತ ಶಾಸಕರ ಕುರಿತು ಕಿಡಿಕಾರಿದ ಅವರು, ಅತೃಪ್ತ ಶಾಸಕರು ಕೂಡಾ ಪಕ್ಷಕ್ಕೆ ದ್ರೋಹ ಬಗೆದಿರುವುದಲ್ಲದೇ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಶಾಸಕರಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ಹೇಳಿದರು.