ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದು ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಎಸಿಬಿಯನ್ನು ರದ್ದುಗೊಳಿಸುವ ಸಾಧ್ಯತೆಯಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಎಸಿಬಿ ರದ್ದಾಗುತ್ತದೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು. ಅದರಂತೆ ಎಸಿಬಿಯನ್ನು ರದ್ದುಗೊಳಿಸಿ ಲೋಕಾಯುಕ್ತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.










