ರೈಲಿಗೆ ಸಿಲುಕಿ ತಂದೆ ಮಗ ದಾರುಣ ಸಾವು…

223
firstsuddi

ತುಮಕೂರು : ರೈಲಿಗೆ ಸಿಲುಕಿ ತಂದೆ ಮತ್ತು ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ಕ್ಯಾತಸಂದ್ರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಹಾಸನ ಮೂಲದ ಯೋಗೇಶ್(30) ಹಾಗೂ ಚಿರಂಜೀವಿ(8) ಮೃತರು ಎಂದು ಗುರುತಿಸಲಾಗಿದ್ದು, ಇವರು ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.