ಪಾಕ್ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆ…

282
firstsuddi

ಜಮ್ಮು ಕಾಶ್ಮೀರ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಮತ್ತೊಂದು ದಾಳಿ ನಡೆದಿದ್ದು, ಭಾರತೀಯ ಸೇನೆ ಉಗ್ರರ ಅಡಗು ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗುಪ್ತಚರ ಇಲಾಖೆಯಿಂದ ಉಗ್ರರ ಅಡಗುತಾಣದ ಬಗ್ಗೆ ಖಚಿತ ಮಾಹಿತಿಯನ್ನು ತಿಳಿದ ಭಾರತೀಯ ಸೇನೆ ಗಡಿಯಿಂದ 30 ಕಿಲೋ ಮೀಟರ್ ದೂರದಲ್ಲಿ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದ್ದು, ದಾಳಿಯಿಂದಾಗಿ ಜಲವಿದ್ಯುತ್ ಯೋಜನೆಯಾದ ನೀಲಂ-ಝೇಲಂ ಪ್ರಾಜೆಕ್ಟ್ ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.