ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಶಿಡ್ಲೆ ಗ್ರಾಮದಲ್ಲಿ ನಡೆದಿದ್ದು, ಅತಿಯಾದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ವಿಘ್ನೇಶ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ನಾಲ್ವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರಗೆ ರವಾನಿಸಲಾಗಿದ್ದು, ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










