ಚಿಕ್ಕಮಗಳೂರು : ಮಲೆನಾಡು ಭಾಗಗಳಲ್ಲಿ ಮಳೆ ನಿಂತರೂ ತುಂಗೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹರಿಹರಪುರದಲ್ಲಿ ತುಂಗಾ ನದಿಯು ಕುಸಿದ ಗುಡ್ಡವನ್ನೇ ತನ್ನ ಒಡಲಿನಲ್ಲಿ ತೇಲಿಸಿಕೊಂಡು ಹೋಗುತ್ತಿರುವ ಅಪರೂಪದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ತುಂಗೆಯ ಪ್ರವಾಹಕ್ಕೆ ಗ್ರಾಮಸ್ಥರು ನಲುಗಿ ಹೋಗಿದ್ದಾರೆ.









