ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ವೈಲ್ಡ್ ಶೋ ಪ್ರಸಾರ…

295
firstsuddi

ನವದೆಹಲಿ : ನದಿ ಮತ್ತು ವನ್ಯಜೀವಿಗಳ ತಾಣವಾಗಿರುವ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸ್ಕವರಿ ಚಾನಲ್‍ನಲ್ಲಿ ಪ್ರಸಾರವಾಗುವ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದ ನಿರೂಪಕ ಬೇರ್ ಗಿಲ್ಸ್ ಅವರ ಜಂಗಲ್ ಅಡ್ವೆಂಚರ್ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮ ಇಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ಭಾರತದಲ್ಲಿ ಮಾತ್ರವಲ್ಲದೇ 180 ದೇಶಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಪ್ರಸಾರವಾಗಲಿದ್ದು, ಇದು ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ತಿಳಿಸಿದ್ದಾರೆ.