ಮಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳೂರಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹದಿಂದ ಸುಮಾರು 275 ಮನೆಗಳು ಸಂಪೂರ್ಣ ನಾಶವಾಗಿದ್ದು, ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ ಹಣ ನೀಡುವುದಾಗಿ ತಿಳಿಸಿದ್ದು, ಮನೆ ಕಳೆದುಕೊಂಡ ಸಂತ್ರಸ್ತರು ಹೊಸ ಮನೆ ನಿರ್ಮಿಸುವವರೆಗೂ ಬಾಡಿಗೆ ಮನೆ ಅಥವಾ ತಮ್ಮ ಸಂಬಂಧಿಕರ ಮನೆಯಲ್ಲಿದ್ದರೂ ತಿಂಗಳಿಗೆ 5ಸಾವಿರ ಬಾಡಿಗೆ ಹಣವನ್ನು ನೀಡಲಾಗುವುದು ಹಾಗೂ ಮಳೆಯಿಂದ ಹಾಳಾಗಿರುವ ಮನೆಗಳ ದುರಸ್ಥಿಗೆ 1ಲಕ್ಷ ರೂ ಹಣವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.










