ಶಾಲಾ ವಾಹನದ ಮೇಲೆ ಬಿದ್ದ ಮರ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು…

249
firstsuddi

ಮಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವ ಘಟನೆ ನಂತೂರು ಬಳಿ ನಡೆದಿದ್ದು, ಅದೃಷ್ಟಾವಶಾತ್ ಶಾಲಾ ವಾಹನದಲ್ಲಿದ್ದ 17 ವಿದ್ಯಾರ್ಥಿಗಳು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ವಿದ್ಯಾರ್ಥಿಗಳನ್ನು ಪಂಪ್ ವೆಲ್ ಮಾರ್ಗದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಹೆದ್ದಾರಿಯ ಪಕ್ಕದಲ್ಲಿದ್ದ ಮರದ ರೆಂಬೆಗಳು ಶಾಲಾ ವಾಹನದ ಮೇಲೆ ಬಿದ್ದಿದ್ದು, ವಿದ್ಯಾರ್ಥಿಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಪರಿಣಾಮ ಕೆಲಕಾಲ ವಾಹನ ಸವಾರರು ಪರದಾಡುವಂತಾಗಿದ್ದು, ಕೂಡಲೇ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಸ್ಥಳಕ್ಕೆ ಮಂಗಳೂರು ಡಿಸಿಪಿ ಲಕ್ಷ್ಮೀ ಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.