ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ ನೆರವು ನೀಡಿದ ನಟ ಪುನೀತ್ ರಾಜ್ ಕುಮಾರ್…

235
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರು ಪ್ರವಾಹ ಸಂತ್ರಸ್ತರಿಗೆಂದು ಸಿಎಂ ಯಡಿಯೂರಪ್ಪ ಅವರ ಪರಿಹಾರ ನಿಧಿಗೆ 5ಲಕ್ಷ ರೂ ನೆರವು ನೀಡಿದ್ದು, ಭಾರಿ ಮಳೆಯಿಂದ ಸಂಭವಿಸಿದ ಪ್ರವಾಹದಿಂದ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗಾಗಿ ಪುನೀತ್ ರಾಜ್ ಕುಮಾರ್ ಅವರು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ತೆರಳಿ 5 ಲಕ್ಷ ರೂ ಚೆಕ್ ನೀಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚೆಕ್ ಕೊಡಲು ಸಿಎಂ ನಿವಾಸಕ್ಕೆ ಬಂದಿದ್ದೇನೆ. ಈಗ ಆಗಿರುವ ನಷ್ಟಕ್ಕೆ ನನ್ನ ಕೈಯಲ್ಲಾದಷ್ಟು ನಾನು ಸಹಾಯ ಮಾಡಿದ್ದೇನೆ. ನಾನು ಫೇಸ್‍ಬುಕ್ ಲೈವ್ ಬಂದು ಹೇಳಿದ ಮೇಲೆ ಜನರು ತುಂಬಾ ಕೆಲಸ ಮಾಡುತ್ತಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬಹಳ ಖುಷಿಯಾಗುತ್ತಿದೆ ಎಂದರು.