ಹೆಚ್.ಡಿ. ಕುಮಾರಸ್ವಾಮಿಯವರು ಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ದೃಢವಾಗಿದೆ : ಜಗಧೀಶ್ ಶೆಟ್ಟರ್…

187
firstsuddi

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಮಾಜಿ ಸಿಎಂ ಜಗಧೀಶ್ ಶೆಟ್ಟರ್ ಅವರು ತಿಳಿಸಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಧವಳಗಿರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿಯವರು ಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ದೃಢವಾಗಿದೆ. ಈ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸಿದ್ದಾರೆ. ಇದರಿಂದ ಈ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಸತ್ಯಾಸತ್ಯತೆ ಹೊರ ಬೀಳಲಿದೆ. ಟೆಲಿಗ್ರಾಫ್ ಕಾಯ್ದೆಯ ಪ್ರಕಾರ ಫೋನ್ ಕದ್ದಾಲಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.