ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಸ್ಥಳದಲ್ಲೇ ನಾಲ್ವರ ಸಾವು…

334
firstsuddi

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹಂದರಹಳ್ಳಿ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ನಕ್ಕಲಪಲ್ಲಿ ಗ್ರಾಮದ ರಮೇಶ್(30), ಮಂಜುನಾಥ್(26), ಅಶೋಕ್ ರೆಡ್ಡಿ(26), ಗೌರೀಶ್(23) ಮೃತ ದುರ್ಧೈವಿಗಳು ಎನ್ನಲಾಗಿದ್ದು, ಇವರೆಲ್ಲರೂ ನಿನ್ನೆ ಮಧ್ಯರಾತ್ರಿ ಸ್ನೇಹಿತನ ಹುಟ್ಟುಹಬ್ಬವನ್ನು ಮುಗಿಸಿಕೊಂಡು ಕಾರಿನಲ್ಲಿ ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಹಾಗೂ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.