ಬಾಸೆಲ್ : ಭಾರತದ ಶೆಟಲ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಿ.ವಿ. ಸಿಂಧು ಹಾಗೂ ಜಪಾನ್ನ ಒಕುಹಾರ ನಡುವಿನ ಫೈನಲ್ ಹಣಾಹಣಿಯಲ್ಲಿ ಪಿ.ವಿ. ಸಿಂಧು ಅವರು ಒಕುಹಾರ ಅವರನ್ನು 21-7, 21-7 ಅಂತರದಿಂದ ಸೋಲಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಸಿಂಧು ಅವರು ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶಿಸಿದ್ದು, 2017 ಹಾಗೂ 2018ರಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ಆದರೆ ಈ ಬಾರಿಯ ಫೈನಲ್ ಪಂದ್ಯದಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆಲ್ಲುವ ಮೂಲಕ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ.










